Archive for June 28th, 2007
“ನನ್ನವ್ವ ಫಲವತ್ತಾದ ಕಪ್ಪು ನೆಲ”
ಸರಯೂ ಚೈತನ್ಯ
ಲಂಕೇಶರ “ಅವ್ವ”, ನಾನು ಮತ್ತೆ ಮತ್ತೆ ಓದಿಕೊಳ್ಳುವ ಕವಿತೆ. ಹಾಗೆ ನೋಡಿದರೆ ಲಂಕೇಶರ “ಅವ್ವ” ಎಲ್ಲರ ಅವ್ವನೂ ಆಗಿಬಿಡುವಂಥವಳು. ಒಂದಿಡೀ ತಾಯಂದಿರ ಪರಂಪರೆಯನ್ನೇ ಒಳಗೊಂಡು ನುಡಿವ ಹೆಂಗಸು ಆಕೆ.
“ನನ್ನವ್ವ ಫಲವತ್ತಾದ ಕಪ್ಪು ನೆಲ” ಎಂಬುದೇ ಒಂದು ಬೆಳಕಿನ ಸಾಕ್ಷಾತ್ಕಾರದ ಹಾಗಿದೆ. ಶ್ರಮ ಸಂಸ್ಕೃತಿಯನ್ನೂ ಮಾತೃ ಪರಂಪರೆಯನ್ನೂ ಒಂದೆಡೆಯಲ್ಲಿ ಕಂಡುಕೊಳ್ಳುವ ಪ್ರತಿಮೆ ಅನ್ನಿಸುತ್ತದೆ ಅದು.
ಪಾರ್ವತಿದೇವಿ ಕೊಳೆಯಿಂದ ಕೂಡಿದ ತನ್ನ ಮೈಯ ಬೆವರಿಂದಲೇ ಗೊಂಬೆ ಮಾಡಿ ಅದಕ್ಕೆ ಜೀವ ಕೊಟ್ಟಳು; ಆತನೇ ಗಣಪತಿ ಎಂಬ ಕಥೆಯೊಂದು ಬರುತ್ತದೆ. ಕೃಷಿ [...]







