ಅಂತರಗಂಗೆಯ ಒಡಲಲ್ಲಿ…
’ಆದಿಮ’ ತನ್ನದೇ ಆದ ಬ್ಲಾಗ್ ಹೊಂದಿದೆ. ಅಂತರಗಂಗೆಯ ಒಡಲಲ್ಲಿ ನಿರಂತರವಾಗಿ ಚಟುವಟಿಕೆ ನಡೆಸುತ್ತಿರುವ ಆದಿಮ ಅನೇಕ ಪುಸ್ತಕಗಳನ್ನೂ ಹೊರ ತಂದಿದೆ. ಅದರ ವಿವರಗಳು ಇಲ್ಲಿವೆ.
ಆದಿಮ ಪ್ರಕಾಶನ
ಅರ್ಥಪೂರ್ಣ ಸಾಂಸ್ಕೃತಿಕ ಸಂವಾದದ ಆಶಯಕ್ಕೆ ಪೂರಕವಾದ ಮತ್ತೊಂದು ಚಟುವಟಿಕೆ- ಪುಸ್ತಕಗಳ ಪ್ರಕಟಣೆ. ಈ ನಿಟ್ಟಿನಲ್ಲಿ ಆದಿಮ ಪ್ರಕಾಶನ ಈವರೆಗೆ ಮಹತ್ವದ ಐದು ಕೃತಿಗಳನ್ನು ಹೊರತಂದಿದೆ:

1. ಆವರಣ ಅನಾವರಣ- ಎನ್.ಎಸ್.ಶಂಕರ್.
ಎಸ್.ಎಲ್.ಭೈರಪ್ಪನವರ ಕೋಮುವಾದಿ ಪ್ರಣಾಳಿಕೆಯ ಕಾದಂಬರಿ ಆವರಣಕ್ಕೆ
ಸಮರ್ಥ ಪ್ರತಿಕ್ರಿಯೆ. ನಾಡಿನ ಸಾಂಸ್ಕೃತಿಕ ವಲಯದಲ್ಲಿ ಹೊಸ ವಾಗ್ವಾದವನ್ನು
ಹುಟ್ಟುಹಾಕಿದ ಹೊತ್ತಗೆ.
2. ಕನಕ ಮುಸುಕು- ಡಾ.ಕೆ.ಎನ್.ಗಣೇಶಯ್ಯ
ಕನ್ನಡಕ್ಕೇ ವಿಶಿಷ್ಟವಾದ ಇತಿಹಾಸ ಸಂಶೋಧನೆ ಆಧಾರಿತ ಕೌತುಕಮಯ ಕಾದಂಬರಿ.
3. ಸಾಮಾನ್ಯನ ಸಂಕ್ರಮಣ- ಎನ್.ಎಸ್.ಹಾಲಪ್ಪ
ಸಾಮಾನ್ಯನೊಬ್ಬನ ಸ್ವಾತಂತ್ರ್ಯ ಹೋರಾಟ ಅನುಭವದ ಅಪರೂಪದ ದಾಖಲೆ.
4. ಕಾರಿಡಾರ್ ಕಾಲಕೋಶ- ಜೆಸುನಾ
ಹಿರಿಯ ಪತ್ರಕರ್ತ ಜೆಸುನಾ ನೀಡಿದ- ನಮ್ಮ ರಾಜಕೀಯ ನಾಯಕರ ದೈನಂದಿನದ ಆಪ್ತ ಚಿತ್ರಣ.
5. ಬ್ರಾಹ್ಮಣ ಧರ್ಮದ ದಿಗ್ವಿಜಯ- ಡಾ.ಬಿ.ಆರ್.ಅಂಬೇಡ್ಕರ್
ಕನ್ನಡಕ್ಕೆ:ಎನ್.ಎಸ್.ಶಂಕರ್. ಹಿಂದೂ ಚರಿತ್ರೆಯಲ್ಲಿ ಆಸಕ್ತಿ ಉಳ್ಳವರೆಲ್ಲರೂ
ಕಡ್ಡಾಯವಾಗಿ ಓದಬೇಕಾದ- ಅಂಬೇಡ್ಕರರ ಸ್ಫೋಟಕ ಸಂಶೋಧನಾ ಕೃತಿಯ
ಕನ್ನಡಾನುವಾದ.
****** ನಮ್ಮೊಂದಿಗೆ ನೀವೂ ಹೆಜ್ಜೆಗೂಡಿಸುವಂತಿದ್ದರೆ, ನೀವು
* ದಿನಕ್ಕೊಂದು ರೂಪಾಯಿ ಕೂಡಿಸಿ ನೀಡುವ ಮೂಲಕ ಆದಿಮದ ಸದಸ್ಯರಾಗಬಹುದು
* ಆದಿಮ ಕಾರ್ಯ ಚಟುವಟಿಕೆಗಳಿಗೆ ನಿಮ್ಮಿಂದಾದಷ್ಟು ಹಣದ ನೆರವು ನೀಡುವ ಮೂಲಕ ನಮ್ಮ ಬಳಗದಲ್ಲಿ ಒಬ್ಬರಾಗಬಹುದು
* ದಿನಕ್ಕೊಂದು ರೂಪಾಯಿ ಕೂಡಿಸಿ ನೀಡುವ ಮೂಲಕ ಆದಿಮದ ಸದಸ್ಯರಾಗಬಹುದು
* ಆದಿಮ ಕಾರ್ಯ ಚಟುವಟಿಕೆಗಳಿಗೆ ನಿಮ್ಮಿಂದಾದಷ್ಟು ಹಣದ ನೆರವು ನೀಡುವ ಮೂಲಕ ನಮ್ಮ ಬಳಗದಲ್ಲಿ ಒಬ್ಬರಾಗಬಹುದು
* ಆದಿಮ ರೆಪರ್ಟರಿಯ ಪ್ರಯೋಗಗಳನ್ನು ಆಹ್ವಾನಿಸಿ ನಿಮ್ಮ ಶಾಲೆ/ಸಮಾರಂಭಗಳಲ್ಲಿ ಅರ್ಥಪೂರ್ಣ
ಮನರಂಜನೆ ಒದಗಿಸುವ ಮೂಲಕವೂ ಆದಿಮಕ್ಕೆ ನೆರವಾಗಬಹುದು
*ಆದಿಮ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ ನೀಡಬಹುದು.
ನಿಮ್ಮ ಸಲಹೆ ಸೂಚನೆಗಳಿಗೂ ಸ್ವಾಗತ. ನಮ್ಮ ಬ್ಯಾಂಕ್ ಖಾತೆ: ಕೆನರಾ ಬ್ಯಾಂಕ್, ಕೋಲಾರ
ಖಾತೆಯ ಹೆಸರು: ಆದಿಮ ಸಾಂಸ್ಕೃತಿಕ ಸಂಘಟನೆ
ಖಾತೆ ಸಂಖ್ಯೆ: 0539101025242
ನಮ್ಮ ವಿಳಾಸ:
ಆದಿಮ
ಜಿಂಕೆ ರಾಮಯ್ಯ ಜೀವತಾಣ
ಶಿವಗಂಗೆ, ಮಡೇರಹಳ್ಳಿ ಅಂಚೆ
ಕೋಲಾರ-563 101
ಜಿಂಕೆ ರಾಮಯ್ಯ ಜೀವತಾಣ
ಶಿವಗಂಗೆ, ಮಡೇರಹಳ್ಳಿ ಅಂಚೆ
ಕೋಲಾರ-563 101
ಫೋನ್: 94484 91906, 9448558378
ಇ-ಮೇಲ್: adima.culture@gmail.com
ಇ-ಮೇಲ್: adima.culture@gmail.com



