ಅಜ್ಜಿಗೆ ಹೇಳಿದ ಕಥೆ

ಉಣ್ಣಿ ಕಥಾ

ಮಲಯಾಳಂ ಮೂಲ: ಎಂ. ಮುಕುಂದನ್

ಇಂಗ್ಲಿಶ್ ಗೆ: ಕೆ,ಎಂ. ಶರೀಫ್ ಮತ್ತು ನೀರದಾ ಸುರೇಶ್

ಕನ್ನಡಕ್ಕೆ: ಉದಯ್ ಇಟಗಿ

ಕಥಾ ಹಿನ್ನೆಲೆ: “ಉಣ್ಣಿಕಥಾ” ಮಲಯಾಳಂ ಕಥಾ ಸ್ಪರ್ಧೆಯಲ್ಲಿ ಮೊದಲ ಬಹುಮಾನವನ್ನು ಗಿಟ್ಟಿಸಿಕೊಂಡು ಮನೆಮಾತಾಗಿದೆ. ಪೂರ್ವದ ಮೇಲೆ ಪಶ್ಚಿಮದ ಹೊಡೆತವನ್ನು ಕಥೆ ಧ್ವನಿಸುತ್ತದೆ. ಪೂರ್ವಾತ್ಯರಿಗೆ ಪಾಶ್ಚಿಮಾತ್ಯದ ವ್ಯಾಮೋಹ ಹಾಗೂ ಅದನ್ನೇ ಬಂಡವಾಳ ಮಾಡಿಕೊಂಡು ಪಾಶ್ಚಿಮಾತ್ಯರಿಂದ ಪೂರ್ವಾತ್ಯರ ಮೇಲೆ ಹಿಡಿತ ಸಾಧಿಸುವದನ್ನು ಕಥೆ ಸೂಚ್ಯವಾಗಿ ಹೇಳುತ್ತದೆ.

ಇಲ್ಲಿ ಎರಡು ವಿಶೇಷತೆಗಳಿವೆ. ಸಾಮಾನ್ಯವಾಗಿ ಅಜ್ಜಿಯರು ಮೊಮ್ಮಕ್ಕಳಿಗೆ ಕಥೆ ಹೇಳಿದರೆ ಇಲ್ಲಿ ಮೊಮ್ಮಗ ಅಜ್ಜಿಗೆ ಕಥೆ ಹೇಳುತ್ತಿದ್ದಾನೆ. ಎರಡನೆಯದಾಗಿ ಕಥೆಯಲ್ಲಿ ಸಿನಿಮಾಅಟೋಗ್ರಾಫಿಕ್ ಶೈಲಿಯಿದೆ. ಅಂದರೆ ಕಥೆಯನ್ನು ಹೇಳುವಾಗ ಪಾತ್ರಗಳು ಹಾಗೂ ಚಿತ್ರಣಗಳು ಗೋಡೆಯ ಮೇಲೆ ಮೂಡುತ್ತವೆ. ಅಲ್ಲದೇ ಕಥೆಯಲ್ಲಿ ಅಲ್ಲಲ್ಲಿ ಪಶ್ಚಿಮದ ದಾಳಿಯನ್ನು ಸಂಕೇತಗಳ ಮೂಲಕ ಹೇಳಲಾಗಿದೆ. ಅದನ್ನು ಓದುಗರು ಗುರುತಿಸಬಹುದು.

ಕಥೆಯ ಕೊನೆಯಲ್ಲಿ ಮುಠಾಶಿ ಕಥೆಯನ್ನು ಕೇಳುತ್ತಾ ಕೇಳುತ್ತಾ ನಿದ್ರೆ ಹೋಗುತ್ತಾಳೆ. ಆದರೆ ನಾವು ಓದುಗರು ಎಚ್ಚೆತ್ತುಕೊಳ್ಳುತ್ತೇವೆ. ಅಂದರೆ ನಮ್ಮನ್ನು ಚಿಂತನೆಗೆ ಹಚ್ಚುತ್ತದೆ.

“ಉಣ್ಣಿ, ಉಣ್ಣಿ ನಂಗೊಂದು ಕಥೆ ಹೇಳು ಬಾರೋ” ಮುಠಾಶಿ ಕರೆದಳು.

ಮುಠಾಶಿ ಆಗಷ್ಟೆ ತನ್ನ ರಾತ್ರಿಯ ಮಿತವಾದ ಗಂಜಿ ಊಟವನ್ನು ಮುಗಿಸಿ ಸಂತೃಪ್ತಿಯಿಂದ ಎಲೆ ಅಡಿಕೆಯನ್ನು ಜಗಿಯುತ್ತಾ ಅದರ ರಸಸ್ವಾದವನ್ನು ಹೀರುತ್ತಾ ಕುಳಿತಿದ್ದಳು. ಈಗ ಉಣ್ಣಿಗಾಗಿ ಕಾಯಹತ್ತಿದಳು. ಉಣ್ಣಿಯ ಕಥೆಯನ್ನು ಕೇಳದೇ ಮುಠಾಶಿಗೆ ನಿದ್ರೆಯೇ ಬರುತ್ತಿರಲಿಲ್ಲ. ಉಣ್ಣಿ ಬರುವ ಸೂಚನೆಗಳು ಕಾಣದೆ ಹೋದಾಗ ತೆರೆದಿಟ್ಟ ಬಾಗಿಲಿನೊಳಗೆ ಇಣುಕುತ್ತಾ ಮತ್ತೊಮ್ಮೆ ಅವನನ್ನು ಕೂಗಿದಳು “ಬಾ ಉಣ್ಣಿ”. ಅವಳು ಅವನ ಕಥೆ ಕೇಳುವದಕ್ಕೆ ಪರಿತಪಿಸುತ್ತಿದ್ದಳು.

“ಉಣ್ಣಿ ಹೋಂ ವರ್ಕ್ ಮಾಡ್ತಿದಾನೆ. ಶಾಲೆಯಲ್ಲಿ ಈಗಾಗಲೇ ಅವನ ಕ್ಲಾಸುಗಳು ಜೋರಾಗಿ ಸಾಗಿವೆ. ಅದಲ್ಲದೆ ಅವನದು ಈಗ ಎರಡನೇ ಕ್ಲಾಸು ಬೇರೆ.” ಅವನ ತಾಯಿ ಮುಠಾಶಿಯನ್ನು ಎಚ್ಚರಿಸಿದಳು.

“ಉಣ್ಣಿ, ಒಂದೇ ಒಂದು ಸಣ್ಣಕತಿ ಹೇಳು ಸಾಕು. ಅದೇ ಉಣ್ಣಿಕಥಾ!” ಮುಠಾಶಿ ಬೇಡಿದಳು. ಅವಳು ಗೋಡೆಗೊರಗಿ ಕಾಲುಚಾಚಿಕೊಂಡು ಮಂಚದ ಮೇಲೆ ಕುಳಿತಿದ್ದಳು. ಕೋಣೆಯಲ್ಲಿ ಕಡಿಮೆ ಪ್ರಕಾಶಮಾನವುಳ್ಳ ಬಲ್ಬ್ ಇದ್ದುದರಿಂದ ಅಲ್ಲಿ ಮಬ್ಬು ಮಬ್ಬಾದ ಬೇಳಕಿತ್ತು.

“ಅಮ್ಮಾ, ಉಣ್ಣಿ ಯಾವಾಗ್ಲೂ, ದಿನಾಲೂ ಹೇಗೆ ತಾನೆ ಕತಿ ಹೇಳ್ತಾನೆ? ಅವನೀಗ ಹೋಂ ವರ್ಕ್ ಮಾಡಬೇಕು”

“ಇದೇ ಕಡೇದ್ದು ಮಗಳೇ, ಇನ್ಮುಂದೆ ಕೇಳಲ್ಲ”

“ಅಮ್ಮಾ, ನಿನ್ನೆನೂ ನೀನು ಹೀಗೆ ಹೇಳಿರಲಿಲ್ವಾ?”

ಮುಠಾಶಿ ಅಪರಾಧಿ ಪ್ರಜ್ಞೆಯಿಂದ ತನ್ನ ದೃಷ್ಟಿಯನ್ನು ಬೇರೆಡೆಗೆ ತಿರುಗಿಸಿದಳು. ಅವಳಿಗೆ ವಯಸ್ಸಾಗಿದ್ದರಿಂದ ಅವಳ ದೇಹವೆಲ್ಲಾ ಸುಕ್ಕುಗಟ್ಟಿ ಹೋಗಿತ್ತು. ಇದೀಗ ಚಿಕ್ಕ ಮಗುವಿನಂತೆ ಸಪ್ಪೆ ಮುಖ ಮಾಡಿ ಕುಳಿತಿದ್ದನ್ನು ನೋಡಿ ಉಣ್ಣಿಯ ಅಮ್ಮನ ಮನಸ್ಸು ಕರಗಿತು.

“ಉಣ್ಣಿ, ಹೋಗು ಮುಠಾಶಿಗೆ ಕಥೆ ಹೇಳು ಹೋಗು. ಅವಳನ್ನು ಮಲಗಿಸಿದ ಮೇಲೆ ನಿನ್ನ ಹೋಂ ವರ್ಕ್ ಮಾಡುವಂತಿ”

ತನ್ನ ಅಜ್ಜಿಗೆ ಬೇಗನೆ ನಿದ್ರೆ ಬರಲೆಂದು ಉಣ್ಣಿ ಮನದಲ್ಲಿಯೇ ಪ್ರಾರ್ಥಿಸಿದ. ಗಂಟೆ ಅದಾಗಲೇ 9.30 ಆಗಿತ್ತು.

ಈಗ ಉಣ್ಣಿ ಬಂದು ಮುಠಾಶಿಯ ಪಕ್ಕ ಕುಳಿತ. ಅವಳ ಮುಖ ಖುಶಿಯಿಂದ ಹೊಳೆಯತೊಡಗಿತು. ದಿನಾ ರಾತ್ರಿ ಮುಠಾಶಿ ಉಣ್ಣಿಯ ಕಥೆಯನ್ನು ಕೇಳದೇ ಮಲಗುವದಿಲ್ಲ. ಅದವಳಿಗದು ಒಂದು ರೀತಿಯ ಅಭ್ಯಾಸವಾಗಿದೆ. ಕೆಟ್ಟ ಅಭ್ಯಾಸ! ಅದನ್ನು ಬಿಡಬೇಕೆಂದರೂ ಅವಳ ಕೈಯಿಂದ ಇನ್ನೂ ಸಾಧ್ಯವಾಗಿಲ್ಲ.

“ನಿನಗೆ ಎಂಥಾ ಕತಿ ಬೇಕು, ಮುಠಾಶಿ?”

“ಚನ್ನಾಗಿರೋದು ಯಾವದೋ ಒಂದು, ನಂಗೆ ನಿದ್ರೆ ತರುವಂಥದ್ದು”

“ಹಾಗಾದರೆ, ಗಾಜಿನ ಮರದ ಕತೆ ಹೇಳಲೆ?”

“ಹೂಂ”

ಉಣ್ಣಿ ಮುಠಾಶಿಯ ಕಡೆ ಸರಿಯುತ್ತಾ ತದೇಕಚಿತ್ತದಿಂದ ತನ್ನ ಮುಂದಿರುವ ಗೋಡೆಯನ್ನೇ ನೋಡುತ್ತಾ ಕುಳಿತ. ಅದೊಂದು ಖಾಲಿ ಗೋಡೆ. ಅಲ್ಲಿ ಯಾವುದೇ ಫೋಟೊಗಳಾಗಲಿ, ಅಲಂಕಾರಿಕ ವಸ್ತುಗಳಾಗಲಿ ಇರಲಿಲ್ಲ. ಈಗ ಆ ಗೋಡೆಯ ಮೇಲೆ ಮೊಟ್ಟಮೊದಲಿಗೆ ಮೋಟುಮೋಟಾದ ಮನುಷ್ಯನ ಚಿತ್ರವೊಂದು ಮೂಡಿತು. ಆ ಮನುಷ್ಯನ ಕಿವಿಯಲ್ಲಿ ಚಿನ್ನದಿಂದ ಮಾಡಿದ ದಪ್ಪ ದಪ್ಪನಾದ ಓಲೆಗಳಿದ್ದವು. ಮಾತ್ರವಲ್ಲ ಅವನ ಮೋಟುಮೊಟಾದ ಬೆರಳುಗಳಲ್ಲೂ ಸಹ ಚಿನ್ನದ ಉಂಗುರಗಳಿದ್ದವು.

More

%d bloggers like this: