ನಿಮಗಾಗಿ ಈ ಒಂದು ಹಾಡು..

‘ಜಿಎಮ್ ಸೂಪರ್ ಮ್ಯಾನ್’…

ದೆಹಲಿಯಲ್ಲಿ ನೆಲೆಸಿರುವ ಮಲೆನಾಡಿನ ಕಲಾವಿದ, ಆಹಾರ ಸಂಬಂಧಿಯಾಗಿ ಸಂಘಟಿಸುತ್ತಿರುವ ಕಲಾಪ್ರದರ್ಶನದಲ್ಲಿ ಕಂಡ ಜಿಎಮ್ ಸೂಪರ್ ಮ್ಯಾನ್ ಹೀಗಿದ್ದ.

ಚಿತ್ರ :ಲಕ್ಷ್ಮೀನಾರಾಯಣ .ವಿ.ಎನ್

ತಾರಾನಾಥರ ಅಂಟಿದ ನಂಟು

ಇವರು ಯಾರು ಬಲ್ಲಿರೇನು?…

-ಡಾ.ಬಿ.ಆರ್. ಸತ್ಯನಾರಾಯಣ

ನನ್ದೊಂದ್ಮಾತು

ಲೇಖಕರೊಬ್ಬರ ಕೃತಿಯೊಂದಿಗೆ ನಡೆಸಿದ ಅನುಸಂಧಾನದಿಂದ ಹೊರಹೊಮ್ಮಿದ ಈ ಕೆಳಗಿನ ಸಾಲುಗಳನ್ನು ಓದುತ್ತಿದ್ದ ಹಾಗೆ, ನನ್ನ ಪ್ರಶ್ನೆಗೆ ನಿಮಗೆ ಉತ್ತರ ಹೊಳೆದೇ ಇರುತ್ತದೆ.  ಅವರ ಫೋಟೋ ಕೂಡಾ ಇದೆ.

ದೇವರು ಇದ್ದಾನೋ ಇಲ್ಲವೋ. ಆದರೆ ಇದ್ದಾನೆ ಎಂದಾಗ ಆಗುವ ವಿಸ್ಮಯ, ಇಲ್ಲ ಎಂದಾಗಲೂ ಆಗುತ್ತದೆ. ಅಂತಹ ವಿಸ್ಮಯಗಳ ಹುಡುಕಾಟ ಇವರ ಹವ್ಯಾಸ.

ಒಬ್ಬ ಮನುಷ್ಯ ಸಾಮಾಜಿಕವಾಗಿ ಸ್ವಲ್ಪ ಗುರುತಿಸಲ್ಪಟ್ಟರೆ ಸಾಕು. ಅವನನ್ನು ಒಂದು ಫಂಥಕ್ಕೆ ಸೀಮಿತಗೊಳಿಸಿ, ಅವನ ಪ್ರಗತಿಪರವಾದ, ಜೀವಪರವಾದ ನಿಲುವುಗಳನ್ನು ಮೂಲೆಗುಂಪು ಮಾಡುವ ಪ್ರತಿಗಾಮಿತನ ಶಕ್ತಿಮೂಲ ಯಾವುದು?

ಬಹುಸಂಸ್ಕೃತಿಯ, ಧಾರ್ಮಿಕತೆಯ ನಾಡಿನಲ್ಲಿ ಸಹಬಾಳ್ವೆ ಸಾದ್ಯವಿರುವೆಡೆಯಲ್ಲೆಲ್ಲಾ ಅಂತರಂಗದಲ್ಲಿ ಕ್ರೋಧ, ದ್ವೇಷಗಳಂತೆ ಜಾತಿಯತೆಯೂ ಸ್ಥಾಯಿಯಾಗಿ ಇರುವುದರಿಂದ ಸಾಂಸ್ಕೃತಿಕ ಚಿದ್ರೀಕರಣವಾಗುತ್ತಿರುವುದು.

ಒಳಗೊಳಗೇ ಮತ್ತೆ ಗಟ್ಟಿಯಾಗುತ್ತಿರುವ ಜಾತೀಯತೆ. ಜಾಗತೀಕರಣದ ತೀವ್ರತರ ಪ್ರಭಾವ ಮತ್ತು ಪರಿಣಾಮದಿಂದಾಗಿ ಜಾತೀಯತೆಯ ಬೇರುಗಳು ಸಡಿಲವಾಗಬಹುದೆಂಬ ಆಶಾಭಾವನೆ.

ಸನಾತನವಾದಿಗಳ ಪ್ರಕಾರ ಗುರುಪೀಠದ ಹಕ್ಕೇ ಇಲ್ಲದ ಶೂದ್ರಪರಂಪರೆಯ ಮಠಗಳೂ ಸಹ ಬೆಳ್ಳಿಕಿರೀಟ, ಅಡ್ಡಪಲ್ಲಕ್ಕಿ ಉತ್ಸವ ಪಾದಪೂಜೆ ಮೊದಲಾದವುಗಳಲ್ಲಿ ತೊಡಗುತ್ತಿರುವುದು.

ಸ್ವಲ್ಪಮಟ್ಟಿನ ವೈಚಾರಿಕತೆಯನ್ನು ಮೈಗೂಡಿಸಿಕೊಂಡಿರುವರಿಗೇ (ನನ್ನನ್ನೂ ಸೇರಿಸಿಕೊಂಡು) ಬೆಕ್ಕು ಅಡ್ಡ ಹೋಗುವುದನ್ನು ನೋಡಿ ’ತಥ್’ ಎನ್ನುವಂತೆ ಆಗುತ್ತದೆ. ಅಂದರೆ ಈ ನಂಬಿಕೆಗಳು ಆನುಷಂಗಿಕವೋ ಎಂಬ ಭಾವ.

ಯಾವುದರ ವಿರುದ್ದ ಶೂದ್ರರು ಸೆಟೆದು ನಿಂತಿದ್ದರೊ ಅದರ ಬಗ್ಗೆಯೇ ಮೃದುವಾದರೆಂದರೆ ಶುದ್ರರೂ ದಲಿತರೂ ಮತ್ತೆ ಸನಾತನಿಗಳ ಊಳಗಕ್ಕಿಳಿಯುವ ಸಾಧ್ಯತೆ.

ಮುಸ್ಲಿಂ ಮೂಲಭೂತವಾದದ ದೆಸೆಯಿಂದ ಉದ್ದೀಪನಗೊಳ್ಳುತ್ತಿರುವ ಹಿಂದೂ ಮೂಲಭೂತವಾದದ ಪರಿಣಾಮಗಳು.

ಶಿಕ್ಷಣ ಪದ್ಧತಿ, ಮಾಧ್ಯಮ ಮತ್ತು ಗುಣಮಟ್ಟ. ಟೀ.ವಿ. ಚಾನೆಲ್‌ಗಳನ್ನು ಬದಲಾಯಿಸುವಂತೆ, ನಮ್ಮ ನಾಯಕರುಗಳು ಬದಲಾಯಿಸುತ್ತಿರುವ, ದೂರಗಾಮಿತ್ವವಿಲ್ಲದ ಶಿಕ್ಷಣ ನೀತಿ.

ಶಿಕ್ಷಕ ಸಮುದಾಯದ ನಿಷ್ಕ್ರೀಯತೆ. ಪಠ್ಯೇತರ ಜ್ಞಾನದ ಬಗೆಗಿನ ಅನಾದರ. ಸಾಹಿತ್ಯವು ಅಧ್ಯಾಪಕರ ಸೊತ್ತಾಗಿರುವುದು. ಸಾಹಿತಿಗಳೆನಿಸಿಕೊಂಡವರಲ್ಲಿ ಹೆಚ್ಚುತ್ತಿರುವ ಜ್ಞಾನದ ಅಹಂಕಾರ ಮತ್ತು ಜ್ಞಾನ ಮೂಲದ ನಿರಾಕರಣೆ.

ತನ್ನ ಅನುಭವ ಮತ್ತು ಆಲೋಚನೆಗಳನ್ನು ಇತರರಿಗೆ ವರ್ಗಾಯಿಸುವ ಅತ್ಯಂತ ಕ್ಷಿಪ್ರ ಮತ್ತು ಸಮರ್ಥ ಮಾರ್ಗದ ಅನ್ವೇಷಣೆ.

ಕಾಲ, ತಂತ್ರಜ್ಞಾನ ಇವುಗಳ ಬದಲಾವಣೆಯ ವೇಗದೊಂದಿಗೆ ಬದಲಾಗದ ಕನ್ನಡ ಭಾಷೆ. ಕಂಪ್ಯೂಟರ್ ಕ್ಷೇತ್ರದಲ್ಲಿ ಕನ್ನಡವನ್ನು ಬಳಸಲು ಇರುವ ಹಿಂಜರಿಕೆ.

ಪುಸ್ತಕೋದ್ಯಮದ ಶಿಥಿಲ ವ್ಯವಸ್ಥೆ ಹಾಗೂ ಭ್ರಷ್ಟಾಚಾರ. ಸುಳ್ಳು ಹೇಳದೆ, ಮೋಸ ಮಾಡದೆ, ಅನ್ಯಾಯವೆಸಗದೆ ಇಪ್ಪತ್ತನಾಲ್ಕು ಗಂಟೆ ಕಳೆಯುವುದು ಸಹ ಈ ದೇಶದಲ್ಲಿ ದುರ್ಭರವಾದ ಮಹಾಸಾಹಸವಾಗುತ್ತಿರುವುದು.

ಇನ್ನಷ್ಟು

‘ಮಾಯಾ ಮೃಗ’ದಲ್ಲಿ ಜಯಂತ್ …

ಕೆ.ಪಿ.ಪೂರ್ಣ ಚಂದ್ರ ತೇಜಸ್ವಿ ಅವರ ಹುಟ್ಟು ಹಬ್ಬದ ಅಂಗವಾಗಿ ಬೆಂಗಳೂರಿನ ರಂಗಶಂಕರದಲ್ಲಿ ಪ್ರದರ್ಶನ ಕಂಡ  ‘ಮಾಯಾಮೃಗ’ ನಾಟಕದ ಬಗ್ಗೆ ಸಾಹಿತಿ ಜಯಂತ್ ಕಾಯ್ಕಿಣಿ ಮಾತನಾಡಿದರು.ಆ ಕಾರ್ಯಕ್ರಮದ ಒಂದು ನೋಟ ಇಲ್ಲಿದೆ …

%d bloggers like this: