ನಾಟಕಗಳ ಹಾಡುಗಳು…

ರಾಮಚಂದ್ರ ದೇವ

ದೇವಸಾಹಿತ್ಯ

ಈ ಕೆಳಗಿನವು ಈಗ ಪ್ರಕಟವಾಗಿರುವ ನನ್ನ ಸಮಗ್ರ ನಾಟಕಗಳು, ಸಂಪುಟ 1 ಮತ್ತು 2ರಲ್ಲಿರುವ ನಾಟಕಗಳ ಕೆಲವು ಹಾಡುಗಳು.

ಈ ಎರಡು ಪುಸ್ತಕಗಳ ಪ್ರಕಾಶಕರು: ಬೋಧಿ ಟ್ರಸ್ಟ್.

ವಿತರಕರು:  1. ನುಡಿ ಪುಸ್ತಕ (ನ್ಯೂ ಪ್ರೀಮಿಯರ್ ಬುಕ್ ಶಾಪ್), ನಂ. 27, 21ನೇ ಮುಖ್ಯ ರಸ್ತೆ, ಬಿ. ಡಿ. ಎ. ಕಾಂಪ್ಲೆಕ್ಸ್ ಎದುರು,  ಬನಶಂಕರಿ ಎರಡನೇ ಹಂತ, ಬೆಂಗಳೂರು 560070 (ಫೋನ್ 080 26711329) email premierpublishingco@yahoo.in ಮತ್ತು

2. ಅತ್ರಿ ಬುಕ್ ಸೆಂಟರ್, ಶರಾವತಿ ಬಿಲ್ಡಿಂಗ್, ಬಲ್ಮಠ ರಸ್ತೆ, ಮಂಗಳೂರು 575001 (ಫೋನ್ 0824 2425161) email athreebook@gmail.com

ಹತ್ತು ಹತ್ತು ಹತ್ತು
ಹತ್ತಿದ ಕುದುರೆಯ ರಾಜ
ರಾಜಾ ರಾಜಾ ರಾಜಾ
ರಾಜಂಗೊಬ್ಳು ರಾಣಿ
ರಾಣೀ ರಾಣೀ ರಾಣೀ
ರಾಣೀಗೊಂದು ಮಂಚ
ಮಂಚಾ ಮಂಚಾ ಮಂಚ
ಮಂಚಕ್ಕೆ ಎರಡು ರೆಕ್ಕೆ
ರೆಕ್ಕೇ ರೆಕ್ಕೇ ರೆಕ್ಕೇ

ಮಂಚದ ರೆಕ್ಕೆ ಗಾಳಿಲಿ ಬಡಿದು
ಮೇಲಕೆ ಹಾರೀ ಹಾರಿ

ಸೂರ್ಯನ ಬೆಂಕಿಗೆ ಮೋಡದ ತಂಪಿಗೆ
ಮಂಚಕೆ ಚಿಗುರೆಲೆ ಮೂಡಿ

ಮಂಚಕೆ ಚಿಗುರೆಲೆ  ಮೂಡಿ
ಮಂಚಕೆ ಚಿಗುರೆಲೆ ಮೂಡಿ

****************

ಕುಣಿಯುತ್ತಾಳೆ ಸೃಷ್ಟಿಯ ತಾಯಿ
ಎಲ್ಲರ ತಾಯಿ ಸೃಷ್ಟಿಯ ಮೂಲ.
ಇರುಳನು ಒಳಗಡೆ ಅದುಮಿ ಹಗಲು
ಏಳುತ್ತಿರಲು ಮೈ ಮುರಕೊಂಡು
ಅದುಮಿದ ಇರುಳು ಕಂಪಿಸುತಿರಲು
ಹಗಲಿನ ಬೆನ್ನಿನ ಹಿಂಬದಿ ಕಾದು
ಹಕ್ಕಿ ಪಕ್ಕಿ ಬಡಿಯಲು ರೆಕ್ಕೆ
ಒಳಗಡೆ ಹೊಂಚಲು ಪಶುಗಳು ಪ್ರಾಣಿ
ಭೂತ-ದೇವರು ಹೋರುತ್ತಿರಲು
ಮರಸಿಗೆ ಕೂತಿರೆ ನೊಣೆಯುವ ಇರುಳು
ಭೂಮಿ ಆಗಸ ಆಗಲಿಸೆ ತೊಡೆಯ
ಸೂರ್ಯ ತೂರಲು ಕೆಂಪನೆ ಕಿರಣ
ತೂರಲು ಸೂರ್ಯ ಕೆಂಪನೆ ಕಿರಣ
ಕಂಪಿಸೆ ಒಳಗಡೆ ನೊಣೆಯುವ ಇರುಳು
ಕುಣಿಯುತ್ತಾಳೆ ಕುಣಿಯುತ್ತಾಳೆ
ಸೃಷ್ಟಿಯ ತಾಯಿ ಎಲ್ಲರ ತಾಯಿ
ನೊಣೆಯುವ ಇರುಳು ಕಂಪಿಸುತಿರಲು
ಹಗಲಿನ ಬೆನ್ನಿನ ಹಿಂಬದಿ ಹೊಂಚಿ
ನೊಣೆಯುವ ಇರುಳು ಕಂಪಿಸುತಿರಲು
ಹಗಲಿನ ಬೆನ್ನಿನ ಹಿಂಬದಿ ಹೊಂಚಿ
ಕುಣಿಯುತ್ತಾಳೆ ಕುಣಿಯುತ್ತಾಳೆ
ಎಲ್ಲರ ತಾಯಿ ಸೃಷ್ಟಿಯ ಮೂಲ
ಎಲ್ಲರ ತಾಯಿ ಸೃಷ್ಟಿಯ ಮೂಲ.

3 ಟಿಪ್ಪಣಿಗಳು (+add yours?)

 1. Ramachandra Deva
  ನವೆಂ 08, 2010 @ 16:24:20

  ಶೀರ್ಷಿಕೆಯ ಕೆಳಗಿರುವ ದೇವಸಾಹಿತ್ಯ ಎಂಬುದನ್ನು ಕ್ಲಿಕ್ ಮಾಡಿ. ಆಗ ನಿಮಗೆ ಇವು ಯಾವ ನಾಟಕಗಳ ಹಾಡುಗಳು, ಆ ನಾಟಕಗಳ ಪುಸ್ತಕ ಎಲ್ಲಿ ಸಿಗುತ್ತದೆ ಎಂಬಿತ್ಯಾದಿ ಮಾಹಿತಿ ಮಾತ್ರವಲ್ಲದೆ ಇನ್ನೂ ಕೆಲವು ಹಾಡುಗಳೂ ಕಾಣುತ್ತವೆ.
  –ದೇವ

  ಉತ್ತರ

 2. numraju
  ನವೆಂ 08, 2010 @ 13:28:52

  ನಾಟಕಗಳ ಹಾಡುಗಳು ಇಂತಹ ಹಾಡುಗಳು ಯಾವ ಪ್ರದೆಶದವು ಎಂಬುದನ್ನು ತಿಳಿಸಿದರೆ ಒಳ್ಳೆಯದು ಹಗ್ಗು ಯಾವ ನಾಟಕದ್ದು, ಉತ್ತರ ಕರ್ನಾಟಕದ್ದೇ, ದಕ್ಷಿಣ ಕರ್ನಾಟಕದ್ದೇ, ಮಲೆನಾಡಿನ ಪ್ರದೆಶದ್ದೆ ಎಂಬ ಮಹಿತಿನೀಡಿದರೆ ಉತ್ತಮ ಅಲ್ಲವೇ ಮಿತ್ರರೇ, ವಂದನೆಗಳೊಡನೆ

  ಉತ್ತರ

 3. Ramachandra Deva
  ನವೆಂ 07, 2010 @ 16:20:12

  Thnaks Mohan. ಹೆಚ್ಚು ಓದುಗರನ್ನು ತಲುಪುವ ಇಂಥಾ ಅವಕಾಶ ನನಗೆ ಖುಷಿ ಕೊಡುತ್ತದೆ.

  ರಾಮಚಂದ್ರ ದೇವ

  ಉತ್ತರ

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  ಬದಲಿಸಿ )

Google photo

You are commenting using your Google account. Log Out /  ಬದಲಿಸಿ )

Twitter picture

You are commenting using your Twitter account. Log Out /  ಬದಲಿಸಿ )

Facebook photo

You are commenting using your Facebook account. Log Out /  ಬದಲಿಸಿ )

Connecting to %s

%d bloggers like this: