ದೋಸೆ ವರ್ಸಸ್ ಪಿಜ್ಜಾ

ದೋಸೆ ವರ್ಸಸ್ ಪಿಜ್ಜಾ; ನಮಗೆ ಸಂತೋಷ ನೀಡುವುದು ಯಾವುದು ?

-ಶಶಿಧರ ಭಟ್

ಕುಮ್ರಿ

ಬದುಕು ಅರ್ಥಪೂರ್ಣವಾಗುವುದು ಯಾವುದರಿಂದ ? ನಮಗೆ ಬೇಕು ಅನ್ನಿಸಿದ್ದನ್ನೆಲ್ಲ ಪಡೆದುಕೊಳ್ಳುವುದರಿಂದಲೇ ? ಅಥವಾ ನಮಗೆ ಬೇಕು ಅನ್ನಿಸಿದ್ದು ಸಿಗದಿರುವುದರಿಂದಲೇ ?

ನಮಗೆ ಬೇಕು ಅನ್ನಿಸಿದ್ದನ್ನೆಲ್ಲ ಅಲ್ಲಾಉದ್ದೀನನ ಅದ್ಬುತ ದೀಪದಿಂದ ಪಡೆದುಕೊಳ್ಳುವಂತಾಗಿದ್ದರೆ ಬದುಕು ನೀರಸವಾಗಿಬಿಡುತ್ತಿತ್ತು. ಆಗ ಬದುಕಿಗೆ ಸ್ವಾರಸ್ಯವೇ ಉಳಿದಿರುತ್ತಿರಲಿಲ್ಲ. ನಮಗೆ ಬೇಕು ಅನ್ನಿಸಿದ್ದು ಗಗನದೀಪವಾಗಿದ್ದರೆ ನಾವು ಅದನ್ನು ಪಡೆದುಕೊಳ್ಳುವುದಕ್ಕೆ ಯತ್ನ ನಡೆಸುತ್ತೇವೆ. ಪಡೆದುಕೊಳ್ಳುವ ಯತ್ನವೇ ನಮ್ಮ ಬದುಕಿಗೆ ಚೈತನ್ಯವನ್ನು ನೀಡುತ್ತದೆ. ಪಡೆದುಕೊಳ್ಳುವುದು ಎನ್ನುವುದು ಕೊನೆ. ಅಲ್ಲಿಗೆ ಎಲ್ಲವೂ ಮುಗಿಯಿತು. ಉದಾಹರಣೆಗೆ ಪ್ರತಿಯೊಬ್ಬ ಮಧ್ಯ ವರ್ಗದ ವ್ಯಕ್ತಿಯ ಆಸೆ ಸ್ವಂತ ಮನೆ ಮತ್ತು ಓಡಾಡುವುದಕ್ಕೆ ಒಂದು ಕಾರು ಪಡೆಯುವುದು ಆಗಿರುತ್ತದೆ. ಆದರೆ ಮನೆ ಮತ್ತು ಕಾರು ದೊರಕಿದ ಮೇಲೆ ಆತ ಸಂತೋಷವಾಗಿರುತ್ತಾನಾ ? ಬಹುಶಃ ಇಲ್ಲ. ಮನೆ ಕಾರು ಬಂದ ಮೇಲೂ ಆತ ಮೊದಲಿನಂತ ಇರುತ್ತಾನೆ. ಹೊಸ ಸೌಲಭ್ಯ ಅವನ ಬದುಕಿಗೆ ಶಾಂತಿ ಮತ್ತು ಪ್ರೀತಿಯನ್ನು ಎಲ್ಲಿಂದಲೋ ತಂದುಕೊಡುವುದಿಲ್ಲ. ಯಾಕೆಂದರ ಶಾಂತಿ. ಸಮಾಧಾನ ಮತ್ತು ತೃಪ್ತಿ ಎಲ್ಲಿಯೋ ಇರುವ ಎಲ್ಲಿಂದಲೂ ಕೊಂಡು ತರುವ ವಸ್ತುವಲ್ಲ.

ಆದರೆ ನಮಗೆ ಬೇಕು ಅನ್ನಿಸಿದ್ದನ್ನು ಪಡೆದುಕೊಳ್ಳಲು ನಾವು ಯತ್ನ ನಡೆಸುವುದಿದೆಯಲ್ಲ ಅದೇ ಬದುಕು. ಯತ್ನ ಮುಗಿಯಿತೆಂದರೆ ಬದುಕೂ ಮುಗಿಯಿತು.

ದಕ್ಷಿಣ ಭಾರತದ ಖ್ಯಾತ ನಟ, ಪ್ರಕಾಶ್ ರೈ ನಮ್ಮ ಜೊತೆಗೆ ಮಲ್ಲೇಶ್ವರಂ ರೂಮಿನಲ್ಲಿ ಇರುತ್ತಿದ್ದ. ಆತನಿಗೆ ಆಗಲೂ ನಟನಾಗಬೇಕು ಎನ್ನುವ ಅಧಮ್ಯ ಆಸೆ. ಆದರೆ ಆಗ ನಮ್ಮ ಬಳಿ ಹಣ ಇರುತ್ತಿರಲಿಲ್ಲ. ನನಗಾಗ ಆರನೂರು ರೂಪಾಯಿ ಸಂಬಳ. ನನ್ನ ಇನ್ನೊಬ್ಬ ಸ್ನೇಹಿತ ಎಲ್. ಸಿ. ನಾಗರಾಜನಿಗೆ ಸಾವಿರದ ಇನ್ನೂರು ರೂಪಾಯಿ. ಪ್ರಕಾಶ್ ರೈಗೆ ಹೇಳಿಕೊಳ್ಳುವಂತಹ ಕೆಲಸ ಇಲ್ಲದಿದ್ದರಿಂದ ಅವನ ವರಮಾನದ ಬಗ್ಗೆ ಯಾವುದೇ ಮಾತನ್ನು ಆಡುವಂತಿರಲಿಲ್ಲ.

ಪ್ರಕಾಶ್ ಪ್ರತಿ ದಿನ ಒಬ್ಬಿಬ್ಬರು ನಿರ್ಮಾಪಕ ನಿರ್ದೇಶಕರನ್ನು ಭೇಟಿ ಮಾಡುತ್ತಿದ್ದ. ಹಾಗೆ ಹೋಗುವುದಕ್ಕೂ ಅವನ ಬಳಿ ಬಸ್ ಚಾರ್ಜ್ ಗೂ ಹಣ ಇರುತ್ತಿರಲಿಲ್ಲ. ಆಗೆಲ್ಲ ಹಲವು ಬಾರಿ ರಸ್ತೆಯಂಚಿನ ಗಾಡಿಯಲ್ಲಿ ರೈಸ್ ಬಾತ್ ಹಂಚಿಕೊಂಡು ತಿನ್ನುತ್ತಿದ್ದವರು ನಾವು.ಒಂದುವರೆ ರೂಪಾಯಿಯ ಚಿತ್ರಾನ್ನ ನಮ್ಮ ಮೂವರ ಹೊಟ್ಟೆ ತುಂಬುತ್ತಿತ್ತು. ಆಗ ಕ್ವಾರ್ಟರ್ ರಮ್ ಗೆ ಕೇವಲ ೮ ರೂಪಾಯಿ. ಯು ಬಿ ಬೀರಿಗೆ ೯ ರೂಪಾಯಿ. ನಮ್ಮ ತಲಾ ಮೂರು ರೂಪಾಯಿ ಹಾಕಿ ಕ್ವಾರ್ಟರ್ ರಂ ತೆಗೆದುಕೊಂದು ನಾವು ಮಾತನಾಡುತ್ತಿದ್ದೆವು. ಪ್ರಕಾಶ ಖ್ಯಾತ ನಟನಾಗುವ ಕನಸು ಕಾಣುತ್ತಿದ್ದ. ಎಲ್ ಸಿ ನಾಗರಾಜ ಮಾತ್ರ ಹಾಗಲ್ಲ. ಆತನಿಗೆ ಬದುಕಿನಲ್ಲಿ ಅದ್ಭುತ ಸಾಧನೆ ಮಾಡಬೇಕು ಅಂತ ಇತ್ತೋ ಇಲ್ಲವೋ ಆದರೆ ಆತ ಕವನ ಬರೆಯುತ್ತ ಹೋರಾಟಗಳಲ್ಲಿ ಪಾಲ್ಗೊಳ್ಳುತ್ತ ಸ್ವಯಂ ಸೇವಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತ ಕ್ರಾಂತಿಯ ಕನಸು ಕಾಣುತ್ತಿದ್ದ. ನನಗೆ ಕ್ರಾಂತಿಯ ಬಗ್ಗೆ ಆಗಲೇ ನಂಬಿಕೆ ಹೊರಟು ಹೋಗಿತ್ತು. ನಾನು ಬದುಕನ್ನು ಬಂದ ಹಾಗೆ ಸ್ವೀಕರಿಸುವ ಮನಸ್ಥಿತಿಯನ್ನು ರೂಪಿಸಿಕೊಂಡು ಬಿಟ್ಟಿದ್ದೆ. ಓದು ಬರವಣಿಗೆ, ಸಿನೆಮಾ,ಟ್ರಿಬಲ್ ಎಕ್ಸ್ ರಂ ನಡುವೆ ನನ್ನ ಬದುಕು ಸಾಗುತ್ತಿತ್ತು.

ಬದುಕನ್ನು ಮುಷ್ಟಿಯಲ್ಲಿ ಹಿಡಿದುಕೊಳ್ಳುವ ಚಲ ನನಗಾಗಲೀ ಎಲ್ಸಿ ಗಾಗಲೀ ಇರಲಿಲ್ಲ. ಆದರೆ ಪ್ರಕಾಶ್ ಹಾಗಲ್ಲ. ಆತ ಎಲ್ಲವನ್ನು ತನ್ನ ಮುಷ್ಟಿಯಲ್ಲಿ ಹಿಡಿದುಕೊಳ್ಳಲು ಯತ್ನ ನಡೆಸುವ ಚಲವಂತ. ಆತನ ಶಕ್ತಿ ಇದ್ದುದು ಎಲ್ಲವನ್ನೂ ಪಡೆದುಕೊಳ್ಳಬೇಕು ಎಂಬ ಚಲ ಮತ್ತು ಹೋರಾಟದಲ್ಲಿ. ಬೇಕಾದ್ದನ್ನು ಪಡೆದುಕೊಂಡ ಮೇಲೆ ಆತ ಸುಮ್ಮನೆ ಕುಳಿತುಕೊಳ್ಳುವವನಲ್ಲ. ಮತ್ತೇನನ್ನೋ ಪಡೆದುಕೊಳ್ಳಲು ಮತ್ತೊಂದು ಹೋರಾಟ.

ನನಗೆ ಅನ್ನಿಸುವ ಹಾಗೆ ಅವನ ಬದುಕು ಮತ್ತು ಯಶಸ್ಸು ಇರುವುದು ಈ ಸತತ ಹೋರಾಟದಲ್ಲೇ ಹೊರತೂ ಪಡೆದುಕೊಂಡ ಸಂತೃಪ್ತಿಯಲ್ಲಿ ಅಲ್ಲ. ಅವನಿಗೆ ಪಡೆದುಕೊಳ್ಳುವುದಕ್ಕೆ ನಡೆಸುವ ಹೋರಾಟದಲ್ಲಿ ಸಂತೋಷ ಇದ್ದರೆ, ನನಗೆ ಪಡೆದುಕೊಳ್ಳದೇ ಇರುವುದರಲ್ಲಿಯೇ ಆ ಸಂತೋಷ ಇದೆ. ಎಲ್ಲವನ್ನು ನನಗಾಗಿ ಬಾಚಿಕೊಳ್ಳುವುದರಲ್ಲಿ ನನಗೆ ನಂಬಿಕೆ ಇಲ್ಲ. ಅದು ನನಗೆ ಸಂತೋಷವನ್ನು ನೀಡುವುದಿಲ್ಲ.

ಬದುಕು ಮತ್ತು ಹೋರಾಟ ಎನ್ನುವುದು ಒಂದು ಮನಸ್ಥಿತಿ.ಸಂತೋಷ ಸಮಾಧಾನವೂ ಮನಸ್ಥಿತಿಯೇ. ಈ ಮನಸ್ಥಿತಿಯನ್ನು ರೂಪಿಸಿಕೊಳ್ಳುವುದು ಮುಖ್ಯವೇ ಹೊರತೂ ಅದು ಹೇಗೆ ದಕ್ಕುತ್ತದೆ ಎಂಬುದರಿಂದ ಅಲ್ಲ. ಆದರೆ ನಾವು ಸಂತೋಷ ಪಡುವುದನ್ನು ಕಲಿಯಬೇಕು. ಸಮಾಧಾನದಿಂದ ಬದುಕುವುದನ್ನೂ ರೂಢಿಸಿಕೊಳ್ಳಬೇಕು. ಇಲ್ಲದಿದ್ದರೆ ಬದುಕು ಸದಾ ಚಿಂತೆಯ ಆಗರವಾಗಿ ಬಿಡುತ್ತದೆ. ಇದನ್ನು ಇನ್ನೂ ಸರಳವಾಗಿ ಹೇಳುತ್ತೇನೆ. ನನಗೆ ಬೆಳಿಗ್ಗೆ ನೀರು ದೋಸೆಯನ್ನೋ, ಉಪ್ಪಿಟ್ಟನ್ನೋ ತಿಂದರೆ ಸಾಕು, ಆದರೆ ನನ್ನ ಮಗನಿಗೆ ಬರ್ಗರ್ ಫಿಜ್ಜಾಗಳೆಂದರೆ ಇಷ್ಟ. ಇಲ್ಲಿ ದೋಸೆ ಒಳ್ಳೆಯದೋ ಬರ್ಗರ್ ಫೀಜ್ಜಾ ಹೆಚ್ಚು ಒಳ್ಳೆಯದೋ ಎಂದು ಚರ್ಚೆ ಮಾಡುತ್ತ ಕುಳಿತರೆ ಚರ್ಚೆ ಮಾತ್ರ ಉಳಿಯುತ್ತದೆ ಇದರಿಂದ ಬೇರೆ ಏನೋ ಸಿಗುವುದಿಲ್ಲ. ಆದರೆ ದೋಸೆಯಲ್ಲಿ ನನಗೆ ಸಿಗುವ ಸಂತೋಷ ನನ್ನ ಮಗನಿಗೆ ಬರ್ಗರ್ ಮತ್ತು ಫಿಜ್ಜಾಗಳಲ್ಲಿ ದೊರಕುತ್ತಿದೆ ಎಂಬುದು ಮಾತ್ರ ಮುಖ್ಯ. ಅಂದರೆ ಪ್ರತಿಯೊಬ್ಬರಿಗೂ ಸಂತೋಷ ನೀದುವ ವಸ್ತುಗಳು ಬೇರೆ ಬೇರೆಯಾಗಿರುತ್ತವೆ. ನನಗೆ ಮುಖ್ಯ ಎನ್ನಿಸುವುದು ನಮಗೆ ಸಂತೋಷವನ್ನು ಕೊಡುವುದು ಯಾವುದು ಎಂದು ಗೊತ್ತಿರಬೇಕು. ಅದನ್ನು ತಿಳಿದುಕೊಳ್ಳಲು ಯತ್ನ ನಡೆಸಬೇಕು. ನಾನು ದೋಸೆ ಎಂದರೆ ಬೇರಯವರು ಏನು ಹೇಳುತ್ತಾರೆ ಎಂದು ಚಿಂತಿಸಲು ಪ್ರಾರಂಭಿಸಿದರೆ ಸಮಸ್ಯೆ ಪ್ರಾರಂಭವಾಗುತ್ತದೆ. ಯಾಕೆಂದರೆ ನಮ್ಮ ಸಂತೋಷ ಬೇರೆಯವರ ಮೇಲೆ ಅವಲಂಬಿಸಿರಬಾರದು. ಆಗ ನಮಗೆ ಸಂತೋಷ ದಕ್ಕುವುದಿಲ್ಲ. ನಮ್ಮ ಸಂತೋಷ ನಮ್ಮ ಮೇಲೆ ಮಾತ್ರ ಅವಲಂಬಿಸಿರಬೇಕು. ಆಗ ಮಾತ್ರ ಬದುಕು ಸುಂದರ ವಾಗಿರುತ್ತದೆ

 

3 ಟಿಪ್ಪಣಿಗಳು (+add yours?)

 1. kohimavittal
  ಡಿಸೆ 17, 2010 @ 21:15:06

  Very nice article. Contentment is one thing and If we are contended as Mr.Sashidhar Bhat feels we will never be disappointed. What we want to get and finally if we don’t get we get disappointed and disillusioned.If we get contentment with whatever we have, we can never be unhappy.
  I fully support the view of Sashidhar Bhat and at the same time wish success to people like Prakash Rai to succeed by sheer hardwork and effort.
  If everyone becomes like me and Sashidhar Bhat, life will become totally dull and boring
  LET EVERYONE HAVE THIER OWN WAY OF LIFE AND FIND HAPPINESS AND CONTENTMENT WITHOUT HURTING OTHERS. THATS EVERYONE’S LIFE AFTER ALL

  ಉತ್ತರ

 2. Anasuya M.R.
  ಡಿಸೆ 17, 2010 @ 02:34:39

  namma santhosha nama mele avalambisirabeku. mana muttida mathu.

  lekhana chennagi mudi bandide.

  ಉತ್ತರ

 3. B T Jahnavi
  ಡಿಸೆ 16, 2010 @ 22:58:14

  ಲೈಫು ಇಷ್ಟೇನೆ……

  ಉತ್ತರ

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  ಬದಲಿಸಿ )

Google photo

You are commenting using your Google account. Log Out /  ಬದಲಿಸಿ )

Twitter picture

You are commenting using your Twitter account. Log Out /  ಬದಲಿಸಿ )

Facebook photo

You are commenting using your Facebook account. Log Out /  ಬದಲಿಸಿ )

Connecting to %s

%d bloggers like this: