ಎಚ್ಚೆಸ್ವಿ ಅನಾತ್ಮ ಕಥನ: ತಂಬೂರಿಯ ತಂತಿ ಕಿತ್ತು ಹೋದ ಮೇಲೂ…

ಮನುಷ್ಯ ಸಂಬಂಧಗಳೆಲ್ಲವೂ ನಮ್ಮ ನಮ್ಮ ಅಹಂಕಾರಗಳ ಗೊಣಸಿನ ಮೇಲೆ ಕೂತಿವೆಯೆ? ಯಾಕೋ ಈ ಇಳಿಹೊತ್ತಿನಲ್ಲಿ ಒಮ್ಮೆಗೇ ಈ ಪ್ರಶ್ನೆ ಮೂಡಿ ನನ್ನ ಎದೆ ಧಸಕ್ಕೆಂದಿದೆ. ಇಷ್ಟು ದಿನ ಮನಸ್ಸಿನ ಯಾವ ಮುಡುಕಿನಲ್ಲಿ ಈ ಪ್ರಶ್ನೆ ಹುದುಗಿಕೊಂಡಿತ್ತೋ? ಈವತ್ತು ಯಾಕಾದರೂ ನನ್ನ ಮುಚ್ಚಿದ ಕಣ್ಮುಂದಿನ ಹಳದಿಗಪ್ಪು ತೆರೆಯ ಮೇಲೆ ಒಮ್ಮೆಗೇ ಮೂಡಿತೋ ನಾನು ಉತ್ತರಿಸಲಾರೆ.ಈಗಾಗಲೇ ಕಳೆದುಹೋಗಿರುವ ಅನೇಕ ಆಪ್ತರು ನನ್ನ ಕಣ್ಣ ಮುಂದೆ ಪೆರೇಡು ನಡೆಸುತ್ತಾರೆ. ಈ ಎಲ್ಲ ಮುಖಗಳೂ ಯಾಕೆ ಮಂಕಾಗಿವೆ? ಯಾಕೆ ಯಾವ ಮುಖದಲ್ಲೂ ಉತ್ಸಾಹವೇ ಕಾಣದಾಗಿದೆ? ನನ್ನ ಕಣ್ಣಿಗೆ ಅವರು ಕಾಣುತ್ತಿರುವಂತೆ ನಾನು ಅವರ ಕಣ್ಣಿಗೆ ಕಾಣುತ್ತಿಲ್ಲವೋ ಹೇಗೆ? ಮೆಲ್ಲಗೆ ಆಕಾಶದಿಂದ ಕತ್ತಲ ಫರದೆ ಕೆಳಗಿಳಿಯುತ್ತಾ ಇದೆ. ಅವರು ಕತ್ತಲ ಕಾವಳದಲ್ಲಿ ನಿಧಾನಕ್ಕೆ ಮರೆಯಾಗಲಿಕ್ಕೆ ಹತ್ತಿದ್ದಾರೆ.

ವರ್ತಮಾನಕ್ಕೆ ಭೂತದ ಕಾಟವಿದೆ. ಆದರೆ ಭೂತಕ್ಕೆ ವರ್ತಮಾನದ ಹಂಗಿಲ್ಲವೋ ಹೇಗೆ? ಎಡಗೈ ಅತ್ತಿತ್ತ ತಿರುವುತ್ತಾ ನಿಧಾನಕ್ಕೆ ನಡೆಯುತ್ತಾ ಇರುವವಳು ನನ್ನ ಪತ್ನಿ. ಆಕೆಯನ್ನು ಗಮನಿಸಿಯೇ ಇಲ್ಲ ಎಂಬಂತೆ ಆಕೆಯನ್ನು ಹಿಂಬಾಲಿಸುತ್ತಾ ಇರುವವರು ನನ್ನ ಅಜ್ಜಿಯರು. ಅವರಾದರೂ ಪರಸ್ಪರ ಅಪರಿಚಿತರಂತೆ ನಡೆಯುತ್ತಾ ಇದ್ದಾರೆ. ಅವರ ಹಿಂದೆ ಜಲೋದರದ ಭಾರ ಹೊತ್ತು ತೇಕುತ್ತಾ ನಡೆಯುತ್ತಿರುವವರು ನನ್ನ ಅಜ್ಜ. ಮತ್ತೆ ಇವರು? ನನಗೆ ತುಂಬ ಪ್ರಿಯವಾದ ಆಕೃತಿಯಾಗಿತ್ತಲ್ಲ ಅದು? ಯಾರು ಮಾರಾಯರೇ ಆಕೆ? ನನ್ನ ಗೆಳೆಯ ನಾರಾಯಣನ ಪತ್ನಿ ನಾಗಿಣಿಯಲ್ಲವೇ?

ನಾಗಿಣಿ ನನ್ನ ಗೆಳೆಯನ ಕೈಹಿಡಿದ ಹೊಸದರಲ್ಲಿ ಚಾಮರಾಜಪೇಟೆಯ ನಮ್ಮ ಬಾಡಿಗೆ ಗೂಡಿಗೆ ಊಟಕ್ಕೆ ಅತಿಥಿಗಳಾಗಿ ಬಂದಾಗ ನಾನು ಆಕೆಯನ್ನು ಮೊದಲು ನೋಡಿದ್ದು. ತೆಳ್ಳಗೆ ಬಳ್ಳಿಯ ಹಾಗೆ ಇದ್ದರು ಆಕೆ. ಮದುವೆಯ ಹೋಮ ಕುಂಡದ ಕೆಂಪು ಇನ್ನೂ ಆಕೆಯ ಕಣ್ಣುಗಳಲ್ಲಿ ಹೊಳೆಯುತ್ತಾ ಇತ್ತು. ಬಲೇ ಮಾತುಗಾರನಾಗಿದ್ದ ನನ್ನ ಗೆಳೆಯನಿಗೆ ಹೋಲಿಸಿದರೆ ಆಕೆ ಪರಮ ಮೌನಿ. ನಮ್ಮ ಇಡೀ ಮನೆ ನನ್ನ ಗೆಳೆಯನ ನಗೆ, ಕೇಕೆ, ಉತ್ಸಾಹದ ಮಾತುಗಳಿಂದ ತುಂಬಿಹೋಗಿತ್ತು. ಆಕೆ ಬೆರಗು ಮತ್ತು ಮುಗ್ಧತೆಯನ್ನು ಮುಖದಲ್ಲಿ ಬಚ್ಚಿಟ್ಟುಕೊಳ್ಳುತ್ತಾ ಮೆಲ್ಲಗೆ ನನ್ನ ಪತ್ನಿಯ ಜತೆ ಅಡುಗೆ ಮನೆಯ ಮಬ್ಬುಗತ್ತಲೆಗೆ ಸರಿದಿದ್ದಳು. ಈಡು ಜೋಡು ತುಂಬ ಚೆನ್ನಾಗಿದೆ ಎಂದು ರಾತ್ರಿ ನನ್ನ ಹೆಂಡತಿ ನನ್ನ ಕಿವಿಯಲ್ಲಿ ಪಿಸುಗುಟ್ಟಿದ್ದಳು. ಉತ್ಸಾಹದ ಅಂಕ ಮುಗಿದ ಮೇಲೆ ನಾಗಿಣಿ ತುಂಬ ಒಳ್ಳೆಯ ಹುಡುಗಿ ಎಂಬ ಮಾತು ನನ್ನ ಪತ್ನಿಯ ಬಾಯಿಂದ ಹೊರಬಿತ್ತು. ಆ ಮಾತು ಪೂರ್ತಿ ಕಿವಿಯಲ್ಲಿ ಇಂಗುವ ಮೊದಲೇ ನಾನು ಒತ್ತಿಬರುತ್ತಿದ್ದ ನಿದ್ದೆಯಲ್ಲಿ ಮುಳುಗುತ್ತಾ ಇದ್ದೆ….

More

ಬರ್ತಾ ಇದೆ ಹೊಸ ಪುಸ್ತಕ..

ಕನ್ನಡ, ಇಂಗ್ಲಿಷ್ ಪುಸ್ತಕ ಕೊಳ್ಳಲು ಅವಧಿ- Flipkart ಸಹಯೋಗದ

ಆನ್ ಲೈನ್ ಮಳಿಗೆಗೆ ಭೇಟಿ ಕೊಡಿ – ಇಲ್ಲಿ ಕ್ಲಿಕ್ಕಿಸಿ

ಗೋವಾದಲ್ಲಿ ಒಂದು ಸಾವು..

ಗೋವಾ ಕನ್ನಡ ಸಮಾಜ, ಪಣಜಿ
ಇವರು ಪ್ರಕಟಿಸುವ
ಗೋವಾ ಜನನುಡಿ
ಕನ್ನಡ ಮಾಸಪತ್ರಿಕೆಯ
ದ್ವಿತೀಯ ವಾರ್ಷಿಕೋತ್ಸವ
ಮುಖ್ಯ ಅಭ್ಯಾಗತರು
ಶ್ರೀ ಶಿವಶಂಕರ ವಿ. ಭಾವಿಕಟ್ಟಿ
ಕನ್ನಡ ಸಂಸೃತಿ ಇಲಾಖೆ, ಬೆಂಗಳೂರು
ಅಧ್ಯಕ್ಷತೆ
ಶ್ರೀ ವಿಜಯ ಶೆಟ್ಟಿ
ಅಧ್ಯಕ್ಷರು, ಗೋವಾ ಕನ್ನಡ ಸಮಾಜ, ಪಣಜಿ

ರಂಗಸಂಪದ, ಬೆಳಗಾವಿ
ಇವರು ಪ್ರಸ್ತುತಪಡಿಸುವ ನಾಟಕ
ಒಂದು ಸ್ವರದ ಸಾವು
ನಿರ್ದೇಶನ
ಶ್ರೀ ಶಿರೀಶ ಜೋಶಿ, ಬೆಳಗಾವಿ

ಸ್ಥಳ: ಗೋವಾ ರಾಜ್ಯ ವಸ್ತು ಸಂಗ್ರಹಾಲಯ, ಕದಂಬ ಬಸ್ ನಿಲ್ದಾಣದ ಹಿಂಭಾಗ, ಪಾಟೊ, ಪಣಜಿ
ದಿನಾಂಕ: ೨೭ ಫೆಬ್ರವರಿ ೨೦೧೧, ರವಿವಾರ
ಸಮಯ: ಸಂಜೆ ೪ ಗಂಟೆ

ಸರ್ವರಿಗೂ ಆದರದ ಸ್ವಾಗತ

ಮಹಾಬಲ ಭಟ್                         ಪ್ರಹ್ಲಾದ ಗುಡಿ
ಸಂಪಾದಕರು                               ಕಾರ್ಯದರ್ಶಿ

 

ಕೊಪ್ಪಳದಲ್ಲಿ ಇಂದು ಸಂಜೆ..

%d bloggers like this: